ಜುಲೈ ೨೬ ರಂದು ಮುದ್ರಾಡಿ ಧರ್ಮಯೋಗಿ ಮೋಹನ್ ಸ್ವಾಮೀಜಿಯವರ ೫ನೇ ಆರಾಧನಾ ಮಹೋತ್ಸವ
ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೨೬ರಂದು ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರವನ್ನು ಬೆಳಗಿಸಿದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ೫ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ.
ಬೆಳಿಗ್ಗೆ ೬:೩೦ ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಶ್ರೀ ಕೃಷ್ಣ ಸಂಧಾನ ನಡೆಯಲಿದೆ. ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಚೆಂಡೆ ಕೌಶಿಕ್ ರಾವ್, ಮದ್ದಳೆ ಗುರುಪ್ರಸಾದ್ ಬೊಳ್ಳಿಂಜಡ್ಕ ಸಹಕರಿಸುವರು. ಪ್ರೋ.ಪವನ್ ಕಿರಣ್ ಕೆರೆ ಕೃಷ್ಣನಾಗಿ, ಪೆರ್ಮುದೆ ಜಯಪ್ರಕಾಶ ಶೆಟ್ಟಿ ಕೌರವನಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮ. : ಬಳಿಕ ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮುದ್ರಾಡಿಯ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅಧ್ಯಕ್ಷತೆ ವಹಿಸುವರು. ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುದ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಎಂ ಮುದ್ರಾಡಿ ಭಾಗವಹಿಸುವರು ಎಂದು ಕ್ಷೇತ್ರದ ಧರ್ಮಾಧಿಕಾರಿ ಧರ್ಮಯೋಗಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ.

