ಹೆಬ್ರಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ, ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳ 14 ಮಕ್ಕಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಸಾಮಗ್ರಿ ಗಳಾದ ಬ್ಯಾಗ್, ಪುಸ್ತಕ, ಛತ್ರಿ,ಚಪ್ಪಲ್ ಇತ್ಯಾದಿ ಸಾಮಗ್ರಿಗಳನ್ನು ವಿತರಣೆ

ಓಂ ಶ್ರೀ ಮಂಜುನಾಥ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಹೆಬ್ರಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ, ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳ 14 ಮಕ್ಕಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಸಾಮಗ್ರಿ ಗಳಾದ ಬ್ಯಾಗ್, ಪುಸ್ತಕ, ಛತ್ರಿ,ಚಪ್ಪಲ್ ಇತ್ಯಾದಿ ಸಾಮಗ್ರಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ದಿನೇಶ್ ಸರ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶ ಹಾಗೂ ಪ ರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವಿ ಹೆಗ್ಗಡೆ ಯವರ ಕಲ್ಪನೆಯ ಬಗ್ಗೆ ಅಸಹಾಯಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಫಲಾನುಭವಿ ಮಕ್ಕಳಿಗೆ ವಿದ್ಯಾನಿಧಿ ನೀಡುತ್ತಿದ್ದು, ಇತರ ಮಕ್ಕಳಂತೆ ಇವರು ಕೂಡ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಉದ್ದೇಶದಿಂದ ನೀಡಲಾಗುತ್ತಿದೆ, ಎಲ್ಲ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಂತಾಗಲಿ ಎಂದು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಶ್ರೀಮತಿ ರೇಷ್ಮಾ, ಹೆಬ್ರಿ ವಲಯದ ಅಧ್ಯಕ್ಷರಾಗಿರುವ ಶ್ರೀಮತಿ ಶಾಲಿನಿ ಭಂಡಾರಿ, ಹೆಬ್ರಿ ತಾಲೂಕಿನ ಶೌರ್ಯ ವಿಪತ್ತು ಘಟಕದ ಕ್ಯಾಪ್ಟನ್ ಶ್ರೀ ಸುರೇಶ್ ಭಂಡಾರಿ, ಕಚೇರಿ ಪ್ರಬಂಧಕರಾದ ಗುರುಪ್ರಸಾದ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ ಸ್ವಾಗತಿಸಿ ಮೇಲ್ವಿಚಾರಕರಾದ ಉದಯರವರು ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *