ಹೆಬ್ರಿ ಪಂಚಾಯತ್ನಲ್ಲಿ ಪರಿಸರ ದಿನಾಚರಣೆ

ಹೆಬ್ರಿ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆಯಲ್ಲಿ ಹೆಬ್ರಿ ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರಾದ ದಿನೇಶ್ ಎ. ಡಿ ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಗೆ ನಾವು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆಗಳ ಬಗ್ಗೆ ಹಾಗೂ ಪ್ಲಾಸ್ಟಿಕ್ ಮಿತ ಬಳಕೆಯ ಬಗ್ಗೆ ತಿಳಿಸಿದರು.
ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯ ಮಹತ್ವ ವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರಾದ ಸದಾನಂದ ಸೆರ್ವೇಗಾರ್ ರವರು ತಿಳಿಸಿದರು.

Leave a Reply

Your email address will not be published. Required fields are marked *