ಹೆಜಮಾಡಿಯಲ್ಲಿ ಆಟಿಡೊಂಜಿ ದಿನಕ್ಕೆ ಸಕಲ ಸಿದ್ಧತೆ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ 19-07-2026 (ಭಾನುವಾರ) ಹೆಜಮಾಡಿಯ ಬಿಲ್ಲವರ ಸಂಘದ ಸಭಾಂಗಣದಲ್ಲಿ ಸಾಂಪ್ರದಾಯಿಕ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀ ದಯಾನಂದ್ ಕತ್ತಲ್‌ಸರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ತಮ್ಮ ಭಾಷಣದಲ್ಲಿ ತುಳುನಾಡಿನ ಆಟಿ ತಿಂಗಳ ಸಾಂಸ್ಕೃತಿಕ ಮಹತ್ವ, ನಮ್ಮ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರಗಳ ಸಂರಕ್ಷಣೆ ಹಾಗೂ ಯುವಪೀಳಿಗೆಯಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯತೆ ಕುರಿತು ಮಾತನಾಡಲಿದ್ದಾರೆ.

ಈ ಸಂದರ್ಭದಲ್ಲಿ SIZZLING GUYS MANGALURU ತಂಡದಿಂದ ತುಳುನಾಡಿನ ಜಾನಪದ ಸಾಂಸ್ಕೃತಿಕ ವೈಭವ ಮೂಡಿಬರಲಿದ್ದು, ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಲಿದೆ. ಅಲ್ಲದೆ, ತುಳುನಾಡಿನ ಸಾಂಪ್ರದಾಯಿಕ ಆಟಿ ತಿಂಗಳ ವಿಶೇಷ ಆಹಾರಗಳ ಸವಿಯನ್ನೂ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ವೈ. ಸುಕುಮಾರ್, ಶಾಂತಲಾ ಶೆಟ್ಟಿ, ಗುಲಾಂ ಮೊಹಮ್ಮದ್, ಶಿವರಾಮ ಶೆಟ್ಟಿ, ಮೋಹನದಾಸ್ ಹೆಜಮಾಡಿ, ಹಾಜಿ ಶೇಕಬ್ಬ, ಅಬ್ದುಲ್ ಅಜೀಜ್ ಹೆಜಮಾಡಿ, ಸೌಜನ್ ಕುಮಾರ್ ಸಾಲಿಗ್ರಾಮ, ದಯಾನಂದ್ ಹೆಜಮಾಡಿ, ರೋಲ್ಫ್ ಡಿ’ಕೋಸ್ಟಾ ಹಾಗೂ ಜಯಶ್ರೀ ಶರತ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಂಯೋಜಕರಾದ ದೀಕ್ಷಾ ಕೆ ಹಾಗೂ ವಿಶಾಲ್ ವಿ. ಬಂಗೇರ ಅವರ ನೇತೃತ್ವದಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಬೋಧ್ ಚಂದ್ರ ಹೆಜಮಾಡಿ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *