ಗಂಟುಬೀಳು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಗಂಟುಬೀಳು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಇಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದರ ಜೊತೆಗೆ, ಭವಿಷ್ಯದಲ್ಲಿ ಪರಿಸರದ ಬಗ್ಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವಂತೆ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಗಿಡ ನೆಡುವ ಮೂಲಕ ಪರಿಸರ ಪ್ರೇಮವನ್ನು ಪ್ರಾಯೋಗಿಕವಾಗಿ ತೋರಿಸಿದರು.
” ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ.ಇಂತಹ ಚಟುವಟಿಕೆಗಳು ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತವೆ. ಎಂದು ಶಾಲಾ ಮುಖ್ಯ ಶಿಕ್ಷಕರು ತಿಳಿಸಿದರು.

