ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ
ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಶಿಕ್ಷಣದ ಪವಿತ್ರ ಪಯಣಕ್ಕೆ ಸಂಪ್ರದಾಯ ಮತ್ತು ಸಂಸ್ಕೃತಿಯ ಸೊಬಗು ಸೇರಿಸಿ, ಅಂಪಾರಿನ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮಗಳು ಅತ್ಯಂತ ವೈಭವ, ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನೆರವೇರಿದವು.ಜೂನ್ 1ರಂದು ಶಾಲಾ ಪುನರಾರಂಭದ ಅಂಗವಾಗಿ ನುಕ್ಯಾಡಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಗಣಹೋಮ ನೆರವೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ…

