ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಮಾನ್ಯತೆ: ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಜನನಿ ದಿವಾಕರ ಶೆಟ್ಟಿ
ನಮ್ಮ ಕರಾವಳಿಯ ಬಹುದಿನದ ಕನಸು ನನಸಾಗಿದೆ. ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಐತಿಹಾಸಿಕ ತೀರ್ಮಾನ.ತುಳು ಕೇವಲ ಭಾಷೆಯಲ್ಲ, ಇದು ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆ, ನಮ್ಮ ತಾಯಿಯ ಉಸಿರು. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ಈ ಗೌರವ ಈ ಹಿಂದೆಯೇ ಸಿಗಬೇಕಿತ್ತು.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ದಶಕಗಳ ಹೋರಾಟಕ್ಕೆ ಸಿಕ್ಕಿದ ಜಯ ಇದು. ಈ ನಿರ್ಧಾರಕ್ಕಾಗಿ…

