Headlines

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಪದ್ಮಪ್ರಸಾದ್‌ ಜೈನ್‌

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಯೊಬ್ಬರೂ ಪರಿಸರದ ಕುರಿತು ಕಾಳಜಿ ವಹಿಸುವುದು ಅವಶ್ಯ ಎಂದು ಎಸ್‌ಕೆಪಿಎ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಅಭಿಪ್ರಾಯಪಟ್ಟರು. ಅವರು ಜೂ. 10ರಂದು ಪಡುಕುಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯ ವತಿಯಿಂದ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರ ನಾಶದಿಂದ ವಾತಾವರಣದ ಮೇಲೆ ಭಾರಿ ಪರಿಣಾಮ ಬೀರುತ್ತಿದ್ದು ಹಮಾಮಾನ ವೈಪರೀತ್ಯವಾಗುತ್ತಿದೆ. ಜಾಗತಿಕ ತಾಪಮಾನ ಏರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಿಸರದ ಕುರಿತು ವ್ಯಾಪಕ…

Read More

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ಸದಸ್ಯರ ಸಮ್ಮುಖದಲ್ಲಿ ನಡೆಯಿತು.ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಅಧ್ಯಕ್ಷತೆ ವಹಿಸಿ, ಸಭೆಯನ್ನು ನಡೆಸಿದರು. ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ನ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ ಎಸ್ ಉಡುಪಿ…

Read More

ಕೀಳಂಜೆ ಸತೀಶ್ ಪೂಜಾರಿ ಕೋರಿಕೆ ಮೇರೆಗೆ ಬಸ್ ನಿಲ್ದಾಣ ದುರಸ್ಥಿ

ಉಡುಪಿಯ ಜಿಲ್ಲೆಯ ಸಾಮಾಜಿಕ ಹೋರಾಟಗಾರ ಸತೀಶ್ ಪೂಜಾರಿ ಕೀಳಂಜೆ ಇವರ ನಿರಂತರ ಹೋರಾಟದ ಮತ್ತು ವಿಶೇಷ ಕಾಳಜಿ ಮೇರೆಗೆ ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮದ ಉದ್ಯಮಿಯೊಬ್ಬರು ಹಾವಂಜೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಬಸ್ಟಾಂಡ್ ಅನ್ನು ನವೀಕರಣಗೊಳಿಸಲು ಸಜ್ಜಾಗಿದ್ದಾರೆ. ಹಾವಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಲಗಿರಿ ಇಲ್ಲಿನ ಶಿಥಿಲ ವ್ಯವಸ್ಥೆಯಲ್ಲಿ ಇದ್ದ ಬಸ್ ಸ್ಟ್ಯಾಂಡ್ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವರದಿ ಆಗಿತ್ತು. ಈ ಬಸ್ ನಿಲ್ದಾಣದ ನಾಲ್ಕು ಪಿಲ್ಲರೂ ಕೂಡ ಸಂಪೂರ್ಣ…

Read More

ಕುಂದಾಪುರ ಕುಲಾಲ ಸಂಘದಿಂದ ಜೂನ್ 7ರಂದು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ ಕುಲಾಲ ಸಂಘ ಮತ್ತು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಗಳ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟದ (ರಿ) ಮಂಗಳೂರು ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಕುಲಾಲ ಸಮುದಾಯದ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕುಲಾಲ ಹೆಮ್ಮಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ವೆಂಕಟರಮನ ಪಿಯು ಕಾಲೇಜು ಇದರ ಪ್ರಾಂಶುಪಾಲರಾದ ಶ್ರೀ…

Read More

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ತಿಳಿಸಿದ್ದಾರೆ.ಕಳೆದ ಎರಡು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇ ದಿನೇ ಉತ್ತಮ…

Read More

ಹೆಬ್ರಿ ಪಂಚಾಯತ್ನಲ್ಲಿ ಪರಿಸರ ದಿನಾಚರಣೆ

ಹೆಬ್ರಿ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆಯಲ್ಲಿ ಹೆಬ್ರಿ ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರಾದ ದಿನೇಶ್ ಎ. ಡಿ ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಗೆ ನಾವು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆಗಳ ಬಗ್ಗೆ ಹಾಗೂ ಪ್ಲಾಸ್ಟಿಕ್ ಮಿತ ಬಳಕೆಯ ಬಗ್ಗೆ ತಿಳಿಸಿದರು.ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯ ಮಹತ್ವ ವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರಾದ ಸದಾನಂದ ಸೆರ್ವೇಗಾರ್ ರವರು ತಿಳಿಸಿದರು.

Read More

ಗಂಟುಬೀಳು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಗಂಟುಬೀಳು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಇಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದರ ಜೊತೆಗೆ, ಭವಿಷ್ಯದಲ್ಲಿ ಪರಿಸರದ ಬಗ್ಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಗಿಡ ನೆಡುವ…

Read More

ಪಂಚವರ್ಣದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾದರಿ ಕಾರ್ಯ- ಆನಂದ್ ಸಿ ಕುಂದರ್

ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಅದರಲ್ಲೂ ಬಹುಮುಖ್ಯವಾಗಿ ಪುನಿತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ,ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಸೇವೆಯೇ…

Read More

ಪಾಂಡೇಶ್ವರ ಗ್ರಂಥಾಲಯದಿಂದ ವಿಶಿಷ್ಟ ಪರಿಸರ ದಿನಾಚರಣೆ: ಗಿಡ ಬೆಳೆಸಿದ ಮಕ್ಕಳಿಗೆ ಬಹುಮಾನ!

ಪಾಂಡೇಶ್ವರ: ಇಲ್ಲಿನ ‘ಅರಿವು ಕೇಂದ್ರ’, ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಜೂನ್ 5ರ ವಿಶ್ವ ಪರಿಸರ ದಿನಾಚರಣೆಯನ್ನು ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಗಿಡ ಸಾಕಿ ಪ್ರಶಸ್ತಿ ಗೆದ್ದ ವಿದ್ಯಾರ್ಥಿಗಳುಕಳೆದ ವರ್ಷದ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗಿದ್ದ ಗಿಡಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲನೆ-ಪೋಷಣೆ ಮಾಡಿ ಬೆಳೆಸಿದ ತರಗತಿಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕೇವಲ ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಜವಾಬ್ದಾರಿಯಿಂದ ಬೆಳೆಸುವುದನ್ನು…

Read More

ಹೆಮ್ಮಾಡಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಜೆಸಿಐ ಕುಂದಾಪುರ ಸಿಟಿ, ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಮಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮ ಪಂಚಾಯತ್ ಹೆಮ್ಮಾಡಿ ಇವರುಗಳ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ, ವಿಶ್ವ ಪರಿಸರ ದಿನಾಚರಣೆ ಹಾಗು ವಿದ್ಯಾರ್ಥಿಗಳಿಗೆ ಸಸಿ ನೀಡುವ ಕಾರ್ಯಕ್ರಮ ನಡೆಯಿತು. ಈ ಪ್ರಪಂಚ ನಮ್ಮ ಪ್ರಕೃತಿಯ ಮಡಿಲು ಈ ಮಡಿಲ ಕಣ ಕಣವು ನಮ್ಮೆಲ್ಲರ ಜೀವಾಳದ ಉಸಿರೇ ಈ ಪರಿಸರ,ನಾವಿರೋತನಕ ಇದನ್ನು ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ, ಇದನ್ನು ನಿಷ್ಠೆಯಿಂದ ಪಾಲಿಸೋಣ,ಎಂದು ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ…

Read More