ಆ.23 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸ್ರಲ್ಲೊಂದಿನ -ಗಮ್ಮತ್ತ್”, ಕುಂದಾಪ್ರ ಸಂಸ್ಕ್ರತಿ ಸಂಪ್ರದಾಯ ಆಚರಣೆ ಇಂದು ಜಾಗತಿಕ ಮಟ್ಟದ ಹಿರಿಮೆ ಹೊಂದಿದೆ;ಶರತ್ ಕುಮಾರ್ ಶೆಟ್ಟಿ ಉಪ್ಪುಂದ
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕ್ರೀಡಾಕೂಟ ಕೆಸ್ರಲ್ಲೊಂದಿನ -ಗಮ್ಮತ್ತ್ ಕಾರ್ಯಕ್ರಮ ಅಗಸ್ಟ್ 23ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ…

